ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶವಂತಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ನಿಧನ ಹೊಂದಿದ್ದಾರೆ ಎಂದು ಅವರ ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ.
ಹಾಸ್ಯ ಚಕ್ರವರ್ತಿ ಬಿರುದು ಪಡೆದಿದರುವ ಹಾಸ್ಯನಟ ಸರಿಗಮ ವಿಜಿ ಅವರು ಆರ್ಥಿಕ ಸಂಕಷ್ಟದಲ್ಲಿ ಕೂಡ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಗತಿಯನ್ನು ಅವರ ಮಗ ರೋಹಿತ್ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ.