ಬೆಂಗಳೂರು : ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಷಲಾಯಿಸುವಂತೆ ಪ್ರಭಾವ ಬೀರುತ್ತದ್ದಾರೆ ಎಂದು ಮುಖ್ಯ ಚುನಾವಣಾ ಅಧೀಕಾರಿಗಳಿಗೆ ಜೆಡಿಎಸ್ ದೂರು ಸಲ್ಲಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ಮಧು ಬಂಗಾರಪ್ಪ ವಿರಿದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಶ್ ದೂರು ನೀಡಿದೆ.

ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿ ಪ್ರಚಾರ ಮಾಡುತ್ತಿರುವ ಕುರಿತು ದೂರು ಸಲ್ಲಿಸಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ದೂರು

ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ , ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್​ಬುಕ್ ಪೇಜ್​ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನಲೆ ಉಪ ಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್​ಬುಕ್ ಹ್ಯಾಂಡ್ಲರ್ ವಿರಿದ್ಧ ಕೋರ್ಟ್​ನಲ್ಲಿ ದೂರು ದಾಖಲು ಮಾಡಿದ್ದಾರೆ. ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠದಿಂದ ಐಪಿಸಿ ಸೆಕ್ಷನ್ 153ಎ, 464, 504 ಮತ್ತು 505(ಬಿ) ರಡಿ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು.

https://youtu.be/gEgKkACItOw?si=EvqVk9wZHlbDVuKV

By admin

Leave a Reply

Your email address will not be published. Required fields are marked *

Verified by MonsterInsights