Top Newsರಾಜಕೀಯರಾಜ್ಯ

ನಟಿ ರಶ್ಮಿಕಾ ಮೇಲೆ ಅಸಂಬದ್ಧ ಹೇಳಿಕೆ; ಶಾಸಕ ರವಿ ಗಣಿಗ ವಿರುದ್ಧ ದೂರು ದಾಖಲು

ನಟಿ ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬಂದಿಲ್ಲ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಶಾಸಕ ರವಿ ಗಣಿಗಗೆ ಸಂಕಷ್ಟ ಎದುರಾಗಿದೆ.

ಶಾಸಕ ರವಿ ಗಣಿಗ ರಶ್ಮಿಕಾ ಮಂದಣ್ಣಗೆ ಬೆದರಿಕೆ ಹಾಕಿದ ಆರೋಪದ ಹಿನ್ನಲೆ ದೂರು ದಾಖಲಾಗಿದೆ. ಶಾಸಕನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಎಂದು ಮಹಿಳಾ ಆಯೋಗಕ್ಕೆ ಕೊಡವ ಸಂಘಟನೆ ದೂರು ನೀಡಿದೆ.

ರಶ್ಮಿಕಾ ಮಂದಣ್ಣ ಅವರು ಕೊಡವ ಸಮುದಾಯದವರಾಗಿದ್ದಾರೆ. ಅವರಿಗೆ ಮಾನಸಿಕ ಹಿಂಸೆಯನ್ನು ನೀಡಿ ಬೆದರಿಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿಲಾಗಿದೆ.

Comments (0)

Your email address will not be published. Required fields are marked *

Back to top button