ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮಾ.17 ರಂದು ಮಾಸೂರು ನಗರ ಬಂದ್‌ಗೆ ಕರೆ ನೀಡಿದೆ
ಅಮಾಯಕ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು ನಂತರ ಅಮಾನವೀಯವಾಗಿ ಕೊಲೆ ಮಾಡಿದ್ದಾರೆ. ಇವರಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ನಾಳೆ (ಮಾ.17) ಜಿಲ್ಲೆಯಾದ್ಯಂತ ಪ್ರತಿಭಟನೆ ಹಾಗೂ ಮಾಸೂರು ಬಂದ್‌ಗೆ ಕರೆ ಕೊಟ್ಟಿವೆ. ಅಲ್ಲದೇ ಮಾಲೀಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿವೆ
ಹುಬ್ಬಳ್ಳಿ ನೇಹಾ ಹಿರೇಮಠ್ ನೆನಪು ಮಾಸುವ ಮುನ್ನವೇ ಲವ್ ಜಿಹಾದ್‌ಗೆ ಹಾವೇರಿಯಲ್ಲಿ ಮತ್ತೊಬ್ಬ ಹಿಂದೂ ಯುವತಿ ಬಲಿಯಾಗಿದ್ದಾಳೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ದುರುಳರಿಗೆ ಗಲ್ಲು ಶಿಕ್ಷೆಯಾಗಬೇಕು. ಅಂದಾಗ ಮಾತ್ರ ಇಂಥವರಲ್ಲಿ ಭಯ ಹುಟ್ಟುತ್ತದೆ. ಹೀಗಾಗಿ ಸ್ವಾತಿ ಹತ್ಯೆ ಮಾಡಿದ ಮೂವರಿಗೂ ಗಲ್ಲು ಶಿಕ್ಷೆಯಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದರು.
ಇತ್ತೀಚೆಗೆ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು, ಪ್ರೀತಿಯ ಬಲೆಗೆ ಬೀಳಿಸಿ ಜೀವ ತೆಗೆಯುತ್ತಿದ್ದಾರೆ. ಇನ್ನಾದರೂ ಹಿಂದೂಗಳು ಎಚ್ಚೆತ್ತುಕೊಂಡು ಸ್ವಾತಿಯಂತಹ ಅಮಾಯಕ ಹೆಣ್ಣುಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಹುಬ್ಬಳ್ಳಿಯ ನೇಹಾ, ಮಾಸೂರಿನ ಸ್ವಾತಿಗೆ ಆದ ಅನ್ಯಾಯ ನಮ್ಮ ಮನೆಯ ಮಕ್ಕಳಿಗೆ ಆಗಬಾರದೆಂದರೆ, ನಾವು ಜಾಗೃತರಾಗಬೇಕು ಎಂದು ವಿಹೆಚ್‌ಪಿ ಮುಖಂಡರು ಒತ್ತಾಯಿಸಿದರು


