ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಲ್ಯಾಂಡ್ಫೋರ್ಡ್ ರಸ್ತೆ ಬಳಿ ಇವರು ತಮ್ಮ ಬಂಗಲೆಯಲ್ಲಿ ಐಟಿ ಅಧಿಕಾರಿಗಳ ದಾಳಿಯ ವೇಳೆ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಪದೇ ಪದೇ ಐಟಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆ ಉದ್ಯಮಿ ರಾಯ್ ಮಾನಸಿಕ ಒತ್ತಡ ಉಂಟಾಗಿತ್ತು. ಆದ್ದರಿಂದ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ.
ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.. ಸಿ.ಜೆ. ರಾಯ್ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಖ್ಯಾತ ಉದ್ಯಮಿ. ಅವರ ದುರಂತ ಅಂತ್ಯವು ರಿಯಲ್ ಎಸ್ಟೇಟ್ ವಲಯದಲ್ಲಿ ದೊಡ್ಡ ಆತಂಕವನ್ನುಂಟುಮಾಡಿದೆ. ಇನ್ನು ಪೊಲೀಸರು ಘಟನೆಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತಿದ್ದು, ಪರಿಶೀಲನೆ ಮುಂದುವರಿದಿದೆ .


