ಬೆಂಗಳೂರು : ಕಾಂಗ್ರೆಸ್-ಬಿಜೆಪಿ ಮಧ್ಯೆ ಪ್ರತಿಭಟನೆ ಪಾಲಿಟಿಕ್ಸ್ ಜೋರಾಗಿದೆ..ಕೇಂದ್ರದಿಂದ ಅನುದಾನ ತಾರತಮ್ಯ ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟದ ಕಹಳೆ ಮೊಳಗಿಸಲು ಸಜ್ಜಾಗಿದೆ. ಇದೇ ಫೆಬ್ರವರಿ 7ಕ್ಕೆ ಅಂದ್ರೆ ನಾಳೆ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದು,ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಸಂಸದರಿಗೆ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಸಿಎಂ ಪತ್ರ ಬರೆದಿದ್ದಾರೆ.
ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವಾಗ್ತಿದೆ.ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ಪ್ರತಿಭಟನೆ ಮಾಡ್ತಿದ್ದೇವೆ.ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ಕನ್ನಡಿಗರ ಸ್ವಾಭಿಮಾನಿ ಹೋರಾಟ ನಡೆಯುತ್ತಿದೆ.ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಕೇಂದ್ರದ ವಿರುದ್ಧ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಅನುದಾನ ಸಮರ ಸಾರಿದೆ. ಕೇಂದ್ರಕ್ಕೆ ಬಿಸಿ ಮುಟ್ಟಿಸಲು ದೆಹಲಿ ಚಲೋ ಹಮ್ಮಿಕೊಂಡಿದ್ದು, ನಾಳೆ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆಯ ಹೋರಾಟಕ್ಕೆ ಸಜ್ಜಾಗಿದೆ.