ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪಾದಪೂಜೆ ಮಾಡುವ ಮೂಲಕ ಪ್ರಚಾರ ಆರಂಭಿಸಿದರು.
ಜಿಲ್ಲೆಯ ರೋಣ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಚುನಾವಣಾ ರ್ಯಾಲಿ ನಿಗದಿಯಾಗಿತ್ತು. ರೋಡ್ ಶೋ ನಡೆಯಬೇಕಿತ್ತು. ಬೆಳಿಗ್ಗೆಯಿಂದ ಜಿಟಿ-ಜಿಟಿ ಮಳೆ ಆರಂಭವಾಗಿದ್ದರಿಂದ ಗಡ್ಡದೇವರಮಠ ಅವರು ಮನೆ-ಮನೆಗೆ ತೆರಳಿ ಪ್ರಚಾರ ಕಾರ್ಯ ಆರಂಭಿಸಿದ್ದರು.
ಈ ವೇಳೆ ಪಟ್ಟಣದ ಮಲ್ಲಯ್ಯ ಮಹಾಪುರುಷಮಠ ಓಣಿಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು ಕಾಂಗ್ರೇಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಪಾದಪೂಜೆ ಮಾಡಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ ಹಾಗೂ ಕಾರ್ಯಕರ್ತರು ಇದ್ದರು.