Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ  ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ  ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬುಧವಾರ ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದ ಅಧಿಕಾರಿಗಳು ಮಾಜಿ ಸಚಿವರನ್ನ ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಅವರ ಮೊಬೈಲ್‌ ಫೋನ್‌ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ.

ಬಹುಕೋಟಿ ಹಗರಣ ಕೇಸ್‌ಗೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಶಾಸಕ ಬಸನಗೌಡ ದದ್ದಲ್‌, ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿ ಸ್ಮಿತಾ, ಕ್ರೆಡಿಟ್‌ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರನ್ನ ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಬುಧವಾರ ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

18 ಕಡೆ ಇಡಿ ದಾಳಿ:
ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಬುಧವಾರವೂ ಸಹ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments