ರಾಜಕೀಯರಾಜ್ಯ

ಸಿಎಂ ಕುರ್ಚಿ ಫೈಟ್ ಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆ ಗೊಂದಲ ಸೃಷ್ಟಿಯಾಗಿತ್ತು. ಈಗ ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದ ಕಾಂಗ್ರೆಸ್ ಪತನವಾಗಲಿದೆ ಎಂದರು.

ಬಹಳ ದಿನ ಸರ್ಕಾರ ಮುಂದುವರೆಯುವುದಿಲ್ಲ,ಇಂತಹ ಬೆಳವಣಿಗೆಗಳಿಂದ ಆಡಳಿತ ಸಂಪೂರ್ಣ ಕುಸಿತವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

Comments (0)

Your email address will not be published. Required fields are marked *

Back to top button