ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ದರಗಳು ಹೆಚ್ಚಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಸುಳ್ಳು ಗ್ಯಾರಂಟಿ ಕೊಟ್ಟಿತ್ತು. ಅದು ಈಗ ಎಕ್ಸ್ಪೋಸ್ ಆಗುತ್ತಿದೆ. ಉಚಿತ ವಿದ್ಯುತ್ ಎಂದರು, ಈಗ ವಿದ್ಯುತ್ ದರ ಹೆಚ್ಚಳವಾಗಿದೆ.
ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಮದ್ಯದ ದರ ಹೆಚ್ಚಳವಾಗಿದೆ. ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ. ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್ನವರು ಹಿಂದೆ ಸರಿಯಲ್ಲ. ಕಾಂಗ್ರೆಸ್ನವರು ಬರೀ ಸುಳ್ಳು ಹೇಳುತ್ತಾರೆ, ನಿರ್ಲಜ್ಜರು ಎಂದು ವಾಗ್ದಾಳಿ ನಡೆಸಿದರು.