Thursday, May 1, 2025
28.8 C
Bengaluru
LIVE
ಮನೆ#Exclusive Newsಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ ; 'ಆಪರೇಷನ್ ಹಸ್ತ'ದ ಪ್ರಯತ್ನ ನಡೆಯುತ್ತಿದೆ ; ಹೆಚ್.ಡಿ....

ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ ; ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್‌ನಿಂದ ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನ್ನು ಮುಗಿಸಬೇಕು ಎಂದು ಹೇಳಿ 12-13 ಶಾಸಕರನ್ನು ಕರೆದುಕೊಂಡು ಬನ್ನಿ ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಆದರೆ, ಅದು ವರ್ಕ್ ಆಗಲ್ಲ, ಜೆಡಿಎಸ್‌ನ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಕಾಂಗ್ರೆಸ್‌ನರ ಪಾಪದ ಕೊಡ ತುಂಬಿದೆ. ಕಾಂಗ್ರೆಸ್‌ನವರು ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಮಾಹಿತಿ ಸಿಕ್ಕಿದೆ. ನಮ್ಮ ಶಾಸಕರ ಏನೇನು ನಡೆಯುತ್ತಿದೆ ಎಂಬುದನ್ನು ನನ್ನ ಬಳಿ ಹೇಳಿದ್ದಾರೆ.ಜನವರಿ 15 ರವರೆಗೂ ನಾನು ಏನೂ ಮಾತನಾಡಲ್ಲ. ಮಾತನಾಡಲು ಬಹಳ ವಿಷಯಗಳಿವೆ. ಸಂಕ್ರಾಂತಿ ಕಳೆಯಲಿ ಮಾತನಾಡುತ್ತೇನೆ.ಜೆಡಿಎಸ್‌ಗೆ ಇದೆಲ್ಲಾ ಶಾಕ್ ಕೊಡಲ್ಲ. ಜೆಡಿಎಸ್‌ನ್ನು ದುರ್ಬಲ ಮಾಡಕೂ ಆಗೋಲ್ಲ. ದೇವರೇ ಕಾಂಗ್ರೆಸ್‌ನವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments