ಬೆಳಗಾವಿ: ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ ಜಾರಕಿಹೊಳಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಮ್ಮ ಬಿಜೆಪಿ ನಾಯಕರು ಪದೇ ಪದೇ ಮಾತನಾಡುವುದು ನೋಡಿ ಅಸಹ್ಯ ಎನಿಸುತ್ತಿದೆ ಎಂದು ತಮ್ಮದೇ ನಾಯಕರ ವಿರುದ್ಧ ಶಾಸಕ ರಮೇಶ ಜಾರಕಿಹೊಳಿ ಅಸಮಾಧಾನ ಹೊರ ಹಾಕಿದ್ದಾರೆ..
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಂತರಿಕ ಸಮಸ್ಯೆ ಬಗ್ಗೆ ನಾವು ತಲೆಕೆಡಿಸಿಕೊಳ್ಳಬಾರದು. ಅಲ್ಲಿ ಯಾರು ಏಕನಾಥ ಸಿಂಧೆ, ಅಜಿತ್ ಪವಾರ್ ಆಗಲ್ಲ. ಬದಲಾಗಿ ಸರ್ಕಾರ ಇನ್ನೂ ಮುಂದುವರಿದ್ರೆ ನಮಗೆ ಅನುಕೂಲ ಆಗಲಿದೆ. ನಾವು ವಿರೋಧ ಪಕ್ಷದ ಕೆಲಸವನ್ನ ಸರಿಯಾಗಿ ಮಾಡಬೇಕಿದೆ ಎಂದರು . ಇನ್ನು ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುತ್ತಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಕ್ರಾಂತಿ ಆಗಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ..


