Tuesday, February 10, 2026
16.6 C
Bengaluru
Google search engine
LIVE
ಮನೆರಾಜಕೀಯಕಾಂಗ್ರೆಸ್ ಪಕ್ಷ ಯಾರನ್ನು ಬೇಕಾದರೂ ಸಿಎಂ ಮಾಡಿಲಿ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ ರಮೇಶ್​​...

ಕಾಂಗ್ರೆಸ್ ಪಕ್ಷ ಯಾರನ್ನು ಬೇಕಾದರೂ ಸಿಎಂ ಮಾಡಿಲಿ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ ರಮೇಶ್​​ ಜಾರಕಿಹೊಳಿ

ಬೆಳಗಾವಿ: ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ ಜಾರಕಿಹೊಳಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ‌ ವಿಚಾರ. ಅದರ ಬಗ್ಗೆ ನಮ್ಮ ಬಿಜೆಪಿ ನಾಯಕರು ಪದೇ ಪದೇ ಮಾತನಾಡುವುದು ನೋಡಿ ಅಸಹ್ಯ ಎನಿಸುತ್ತಿದೆ ಎಂದು ತಮ್ಮದೇ ನಾಯಕರ ವಿರುದ್ಧ ಶಾಸಕ ರಮೇಶ ಜಾರಕಿಹೊಳಿ ಅಸಮಾಧಾನ ಹೊರ ಹಾಕಿದ್ದಾರೆ..

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಆಂತರಿಕ ಸಮಸ್ಯೆ ಬಗ್ಗೆ ನಾವು ತಲೆಕೆಡಿಸಿಕೊಳ್ಳಬಾರದು. ಅಲ್ಲಿ ಯಾರು ಏಕನಾಥ ಸಿಂಧೆ, ಅಜಿತ್ ಪವಾರ್ ಆಗಲ್ಲ. ಬದಲಾಗಿ ಸರ್ಕಾರ ಇನ್ನೂ ಮುಂದುವರಿದ್ರೆ ನಮಗೆ ಅನುಕೂಲ ಆಗಲಿದೆ. ನಾವು ವಿರೋಧ ಪಕ್ಷದ ಕೆಲಸವನ್ನ ಸರಿಯಾಗಿ ಮಾಡಬೇಕಿದೆ ಎಂದರು . ಇನ್ನು ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುತ್ತಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಕ್ರಾಂತಿ ಆಗಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ..

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments