Thursday, November 20, 2025
19.1 C
Bengaluru
Google search engine
LIVE
ಮನೆ#Exclusive Newsಶತಮಾನೋತ್ಸವದ ಸಂಭ್ರಮದಲ್ಲಿ ಕಾಂಗ್ರೆಸ್​ ಪಕ್ಷ...!

ಶತಮಾನೋತ್ಸವದ ಸಂಭ್ರಮದಲ್ಲಿ ಕಾಂಗ್ರೆಸ್​ ಪಕ್ಷ…!

ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯ ಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ಮಾಜಿ ಕೇಂದ್ರ ಸಚಿವ ಶಶಿ ತರೂರ್, ಕಾಂಗ್ರೆಸ್ ಯುವ ನಾಯಕ ಕನ್ನಯ್ಯಾ ಕುಮಾರ  ಬೆಳಗಾವಿಗೆ ಆಗಮಿಸಲಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹಾ ಸಮಾವೇಶ ನಡೆಯಲಿದೆ. ಇದಕ್ಕೆ ಸತ್ಯಾಗ್ರಹ ಬೈಠಕ್ ಎಂದು ಕಾಂಗ್ರೆಸ್ ನಾಮಕರಣ ಮಾಡಿದೆ. ಮೈಸೂರು ದಸರಾದಂತೆ ಗಡಿ ಜಿಲ್ಲೆ ಕಂಗೊಳಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರು ಹಾಗೂ ಘಟಾನುಘಟಿ ನಾಯಕರು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

1924ರ ಡಿಸೆಂಬರ್ 26 ಹಾಗೂ 27ರಂದು ಮಹಾತ್ಮ ಗಾಂಧೀಜಿ ಬೆಳಗಾವಿ ಭೇಟಿ ನೀಡಿ, ಕಾಂಗ್ರೆಸ್ ಅಧಿವೇಶದಲ್ಲಿ ಭಾಗಿಯಾಗಿದ್ದರು. ಈ ಅಧಿವೇಶನಕ್ಕೆ 100 ವರ್ಷಗಳಾದ ಹಿನ್ನಲೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments