ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ.
ಎಐಸಿಸಿ ಇಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕಿ ಸೌಮ್ಯ ರೆಡ್ಡಿ ಅವರನ್ನು ಆಯ್ಕೆ ಮಾಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೆ.ಸಿ ವೇಣುಗೋಪಾಲ್ ಅವರು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಅಲ್ಲದೇ ಅಧ್ಯಕ್ಷರ ಅನುಮತಿಯ ಮೇರೆಗೆ ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚಿಕು ನಾಚಿ, ಚಂಡಿಗಡದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಂದಿತಾ ಹೂಡ ಅವರನ್ನು ಆಯ್ಕೆ ಮಾಡಿದ ಬಗ್ಗೆ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಪುಷ್ಪ ಅಮರನಾಥ್ ಅವರಿಂದ ತೆರವಾದ ಸ್ಥಾನಕ್ಕೆ ಸೌಮ್ಯ ರೆಡ್ಡಿ ಆಯ್ಕೆಯಾಗಿದೆ ಎಂದು ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.