ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂಗೆ ನಿಜವಾಗಿಯೂ ಕಳಕಳಿ ಇದ್ದರೆ, ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ ಎಂದರು.
ಕಾಂಗ್ರೆಸ್ ಬೆಳೆಸಿದ ವಿಷ ಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಬ್ರಿಟೀಷರ ಪರವಿದ್ದರು. ಈಗ ಮುಸ್ಲೀಮರು, ಕೊಲೆಗಡುಕರ ಪರ ಇದ್ದಾರೆ. ಸಿಎಂಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಒತ್ತಾಯಿಸಿದರು.
ವಕೀಲರು ಅವನ ಪರ ನಿಲ್ಲಬಾರದು. ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲ ಅಂತಾ ಕೊಲೆ ಮಾಡಿದ್ದಾನೆ. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆ ಈ ರೀತಿ ಕೊಲೆಗಳಾಗುತ್ತೆ ಎಂದು ಕಿಡಿಕಾರಿದರು.