ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷದ ಕಥೆಯನ್ನು ತೆರೆದಿಡುವ ಚಿತ್ರ ಅಡವಿ. ಈ ಚಿತ್ರದ ಸಿಂಗಾರ ಸಿಂಗಾರ ತ್ವಾಟ ಹಾಡಿನ
ಲಿರಿಕಲ್ ವೀಡಿಯೋವನ್ನು ಕೆಜಿಎಫ್ ಮುನಿಸಿಪಲ್ ಗ್ರೌಂಡ್ ನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲ, ಕಬಾಲಿ, ತಂಗಲಾನ್ ಚಿತ್ರಗಳ ನಿರ್ದೇಶಕ ಪ.ರಂಜಿತ್ ಅವರು ಬಿಡುಗಡೆ ಮಾಡಿದರು. ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಅವರ ಸಾಹಿತ್ಯ, ನವೀನ್ ಸಜ್ಜು ಹಾಡನು ಹಾಡಿದ್ದಾರೆ , ಸಂವಿಧಾನ ಸಿನಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಟೈಗರ್ ನಾಗ್ ಅವರು ಚಿತ್ರಕಥೆ ಬರೆದ ನಿರ್ಮಿಸಿ, ನಿರ್ದೇಶಿಸಿರುವ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.

ಅಡವಿ ಚಿತ್ರದಲ್ಲಿ ನೆಲದ ಮಣ್ಣಿನ ಮಕ್ಕಳ ಕಥೆಯೊಂದಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ವಿಚಾರಗಳನ್ನು ಎತ್ತಿ ಹಿಡಿಯುವ ಸಿನಿಮಾವಾಗಿದೆ
ಅರಣ್ಯವೇ ಸರ್ವಸ್ವ ಎಂದು ನಂಬಿರುವ ಕಾಡಿನ ಮೂಲ ನಿವಾಸಿಗಳ ಜೀವನ, ತಮ್ಮ ಸ್ವಚ್ಛಂದ ಬದುಕಿಗಾಗಿ ಅವರು ನಡೆಸುವ ಹೋರಾಟ, ಬುಡಕಟ್ಟು ಜನರು ಮತ್ತು ಪ್ರಸ್ತುತ ವ್ಯವಸ್ಥೆಯ ನಡುವಿನ ಸಂಘರ್ಷವನ್ನು ತೆರೆಯುವ ಪ್ರಯತ್ನ ಕಥೆಯಲ್ಲಿದೆ. ಈಗಾಗಲೇ ಅಡವಿ ಚಿತ್ರದ ಚಿತ್ರೀಕರಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಚಿತ್ರತಂಡವೀಗ ಬಿಡುಗಡೆಯ ಸಿದ್ಧತೆ ನಡೆಸಿದೆ.
ಅಡವಿ ಚಿತ್ರವನ್ನು ಐತಿಹಾಸಿಕ ಸಿದ್ದರಬೆಟ್ಟ, ಸಂಜೀವಿನಿ ಕ್ಷೇತ್ರ, ಸೂರ್ಯ ಗವಿ, ತಿಮ್ಮಲಾಪುರ ಅಭಯಾರಣ್ಯ, ಚಿಕ್ಕಮಗಳೂರು, ಸಕಲೇಶಪುರ, ತುಮಕೂರು ಮತ್ತು ಕೊರಟಗೆರೆ ಅಲ್ಲದೆ ಆದಿವಾಸಿಗಳು ವಾಸಿಸುವ ಗುಡಿಸಲುಗಳಲ್ಲಿ ಚಿತ್ರೀಕರಿಸಲಾಗಿದೆ.