ದಾಬಸ್‌ಪೇಟೆ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿ ಅಮಾನತುಗೊಂಡಿದ್ದ ಸಿಐಎಸ್ ಎಫ್ ಸಿಬ್ಬಂದಿ ಕುಲ್ವಿಂದರ್‌ಕೌರ್‌ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಅವರ ವಿರುದ್ಧ ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿದ್ದು, ಕುಲ್ವಿಂದರ್‌ರನ್ನು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪವಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಜೂ.7 ರಂದು ಕಂಗನಾ, ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಹೊರಟಿದ್ದಾಗ, ರೈತರ ಆಂದೋಲನಕ್ಕೆ ಸಂಬಂಧಿಸಿ ಕಂಗನಾ ನೀಡಿದ್ದ ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ಹೇಳಿ ಕುಲ್ವಿಂದರ್ ಕಪಾಳಮೋಕ್ಷ ಮಾಡಿದ್ದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com