Wednesday, January 28, 2026
20.2 C
Bengaluru
Google search engine
LIVE
ಮನೆ#Exclusive Newsಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪ: ಪ್ರಧಾನಿ ಮೋದಿ

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪ: ಪ್ರಧಾನಿ ಮೋದಿ

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್​ಕಿ ಬಾತ್​ನಲ್ಲಿ ಮಾತನಾಡಿದ ಅವರು,  ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು ಸಂಪರ್ಕಿಸಲು constitution75.com ಹೆಸರಿನ ವಿಶೇಷ ವೆಬ್‌ಸೈಟ್ ಅನ್ನು ಸಹ ರಚಿಸಲಾಗಿದೆ ಎಂದು ಹೇಳಿದರು. ಇದರಲ್ಲಿ ನೀವು ಸಂವಿಧಾನದ ಪೀಠಿಕೆಯನ್ನು ಓದಿದ ನಂತರ ನಿಮ್ಮ ವೀಡಿಯೊವನ್ನು ಅಪ್‌ಲೋಡ್ ಮಾಡಬಹುದು. ವಿವಿಧ ಭಾಷೆಗಳಲ್ಲಿ ಸಂವಿಧಾನವನ್ನು ಓದಬಹುದು, ಸಂವಿಧಾನದ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು ಎಂದರು.

ಮಹಾಕುಂಭ ವಿಶಿಷ್ಟತೆ ವಿವರಿಸಿದ ಮೋದಿ;

ಮಹಾಕುಂಭದ ವಿಶೇಷತೆ ಬಗ್ಗೆ ಮಾತನಾಡಿರುವ ಪ್ರಧಾನಿ ಈ ಕಾರ್ಯಕ್ರಮದಲ್ಲಿ ಕೋಟಿಗಟ್ಟಲೆ ಜನ ಸೇರುತ್ತಾರೆ. ಲಕ್ಷಗಟ್ಟಲೆ ಸಂತರು, ಸಾವಿರಾರು ಸಂಪ್ರದಾಯಗಳು, ನೂರಾರು ಪಂಗಡಗಳು ಎಲ್ಲರೂ ಸಮಾನರಾಗಿ ಭಾಗವಹಿಸುತ್ತಾರೆ. ಎಲ್ಲಿಯೂ ತಾರತಮ್ಯವಿಲ್ಲ, ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ. ವಿವಿಧತೆಯಲ್ಲಿ ಏಕತೆಯ ಇಂತಹ ದೃಶ್ಯ ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ.

2024 ರಲ್ಲಿ ನಾವು ಚಿತ್ರರಂಗದ ಅನೇಕ ಮಹಾನ್ ವ್ಯಕ್ತಿಗಳ 100 ನೇ ಜನ್ಮ ವರ್ಷಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ವ್ಯಕ್ತಿಗಳು ಭಾರತೀಯ ಚಿತ್ರರಂಗಕ್ಕೆ ವಿಶ್ವ ಮಟ್ಟದಲ್ಲಿ ಮನ್ನಣೆ ನೀಡಿದರು. ರಾಜ್ ಕಪೂರ್ ಭಾರತದ ಸಾಫ್ಟ್ ಪವರ್ ಅನ್ನು ಚಲನಚಿತ್ರಗಳ ಮೂಲಕ ಜಗತ್ತಿಗೆ ಪರಿಚಯಿಸಿದರು. ರಫಿ ಸಾಹಬ್ ಅವರ ಧ್ವನಿಯಲ್ಲಿ ಆ ಮ್ಯಾಜಿಕ್ ಇತ್ತು, ಅದು ಪ್ರತಿ ಹೃದಯವನ್ನು ಮುಟ್ಟಿತು ಎಂದರು.

ಮುಂದಿನ ವರ್ಷ ನಮ್ಮ ದೇಶದಲ್ಲಿ ಮೊದಲ ಬಾರಿಗೆ ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ವೆಬ್ ಶೃಂಗಸಭೆಯಲ್ಲಿ ಪ್ರಪಂಚದಾದ್ಯಂತದ ಮಾಧ್ಯಮ ಮತ್ತು ಮನರಂಜನಾ ದಿಗ್ಗಜರು ಭಾಗವಹಿಸುತ್ತಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments