ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಈಗಾಗಲೇ ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮುಂದಿನ ಕೆಲವು ಗಂಟೆಗಳ ಕಾಲ ರಾಷ್ಟ್ರರಾಜಧಾನಿಯ ಹೆಚ್ಚಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ತಿಳಿಸಿದೆ.
ದೆಹಲಿ ಸೇರಿದಂತೆ ಉತ್ತರಾಖಂಡ, ಉತ್ತರಪ್ರದೇಶದ ಪಶ್ಚಿಮ ಭಾಗ, ಪಶ್ಚಿಮ ಬಂಗಾಳ, ಮಿಜೋರಾಮ್ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.