ಬಳ್ಳಾರಿ: ಅಡುಗೆ ಮನೆಯ ಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದು, ಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಡುಗೆ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದೆ.
ಮನೆಯಲ್ಲಿದ್ದ ಹಾಲಪ್ಪ (42), ಕವಿತಾ (32), ಗಂಗಮ್ಮ (63), ಮೈಲಾರಪ್ಪ (48), ಹಾಗೂ ಮಲ್ಲಮ್ಮ ಸೇರಿ 8 ಜನ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.


