Tuesday, January 27, 2026
24 C
Bengaluru
Google search engine
LIVE
ಮನೆರಾಜ್ಯದೇಶದ ಅತಿದೊಡ್ಡ ದರೋಡೆ: ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ಹೈಜಾಕ್!

ದೇಶದ ಅತಿದೊಡ್ಡ ದರೋಡೆ: ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ಹೈಜಾಕ್!

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನು ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದೆ. ಮೂರು ರಾಜ್ಯಗಳ ಪೊಲೀಸರ ನಿದ್ರೆ ಗೆಡಿಸಿರುವ ಈ ಪ್ರಕರಣ ಈಗ ಇಡೀ ದೇಶದ ಗಮನ ಸೆಳೆದಿದೆ.

ಕಳೆದ 2025ರ ಅಕ್ಟೋಬರ್ 16ರಂದು ಈ ದರೋಡೆ ನಡೆದಿದೆ. ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ ಈ ಭಾರೀ ಮೊತ್ತದ ಹಣವನ್ನು ಎರಡು ಕಂಟೇನರ್‌ಗಳಲ್ಲಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು. ಖಾನಾಪುರ ತಾಲೂಕಿನ ದಟ್ಟ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ, ಕಿಡಿಗೇಡಿಗಳು ಕಂಟೇನರ್‌ಗಳನ್ನು ಹೈಜಾಕ್ ಮಾಡಿ ಪರಾರಿಯಾಗಿದ್ದರು.

ಘಟನೆ ನಡೆದು ತಿಂಗಳುಗಳೇ ಕಳೆದರೂ ಯಾರಿಗೂ ತಿಳಿಯದಂತೆ ರಹಸ್ಯವಾಗಿಡಲಾಗಿತ್ತು. ಆದರೆ, ಹಣದ ಮಾಲೀಕ ಕಿಶೋರ್ ಶೇಟ್ ಸಹಚರರು, ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬಾತನನ್ನು ಅಪಹರಿಸಿ ಚಿತ್ರಹಿಂಸೆ ನೀಡಿದಾಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂದೀಪ್‌ನನ್ನು ಒಂದೂವರೆ ತಿಂಗಳ ಕಾಲ ಅಕ್ರಮ ಬಂಧನದಲ್ಲಿಟ್ಟು “400 ಕೋಟಿ ಹಣ ಕೊಡದಿದ್ದರೆ ಕೊಲ್ಲುವುದಾಗಿ” ಬೆದರಿಕೆ ಹಾಕಲಾಗಿತ್ತು. ಅಪಹರಣಕಾರರಿಂದ ತಪ್ಪಿಸಿಕೊಂಡ ಸಂದೀಪ್, 2026ರ ಜನವರಿ 1ರಂದು ನಾಸಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಬೃಹತ್ ದರೋಡೆಯ ಕರಾಳ ಮುಖ ಅನಾವರಣಗೊಂಡಿದೆ.

ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶಿಸಿದ್ದಾರೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಪ್ರಮುಖ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments