ಬೆಂಗಳೂರು: ಕಾರಿನ ಸೈಡ್ ಮಿರರ್ ಗೆ ಬೈಕ್ ಟಚ್ ಆಗಿದ್ದಕ್ಕೆ ಕಾರಿನಲ್ಲಿದ್ದ ದಂಪತಿ ಬೆನ್ನಟ್ಟಿ ಹಿಂದಿನಿ ಬೈಕ್ ಸವಾರರನ್ನು ಎರಡು ಕಿಲೋ ಮೀಟರ್ ದೂರ ಚೇಸ್ ಮಾಡಿ, ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿದ ಆರೋಪದಲ್ಲಿ ದಂಪತಿ ಅರೆಸ್ಟ್ ಆಗಿದ್ದಾರೆ.. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ದಂಪತಿಗಳಾದ ಮನೋಜ್ ಕುಮಾರ್ ಮತ್ತು ಆರತಿ ಶರ್ಮಾ ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ದರ್ಶನ್ ಎಂಬ ಯುವಕ ಮೃತಪಟ್ಟಿದ್ದು, ಅವನ ಸ್ನೇಹಿತ ವರೂಣ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತನಿಖೆಯಿಂದ ಕೊಲೆಯ ಸತ್ಯ ಬಯಲಾಗಿದೆ.
ಅಕ್ಟೋಬರ್ 22 ರಂದು ರಾತ್ರಿ 11:30ರ ಸುಮಾರಿಗೆ ಶ್ರೀರಾಮ ಲೇಔಟ್‌ನಲ್ಲಿ ದರ್ಶನ್ ಮತ್ತು ವರುಣ್ ಇಬ್ಬರೂ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮುಂದೆ ಹೋಗುತ್ತಿದ್ದ ಕಾರಿನ ಮಿರರ್‌ಗೆ ಟಚ್ ಆಗಿದೆ. ಈ ವೇಳೆ ಮಿರರ್ ಒಡೆದಿದ್ದು, ಕಾರಿನಲ್ಲಿದ್ದ ಮನೋಜ್ ಕುಮಾರ್ ಮತ್ತು ಆರತಿ ಶರ್ಮ ದಂಪತಿ ಕೋಪಗೊಂಡು, ಸುಮಾರು ಎರಡು ಕಿಲೋಮೀಟರ್‌ನಷ್ಟು ಹಿಂಬಾಲಿಸಿ ಬೈಕ್‌ಗೆ ಗುದ್ದಿದ್ದಾರೆ ಎಂದು ತಿಳಿದುಬಂದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ದರ್ಶನ್ ಮತ್ತು ವರುಣ್ ಇಬ್ಬರೂ ರಸ್ತೆಗುರುಳಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಜೆಪಿ ನಗರ ಸಂಚಾರ ಪೊಲೀಸ್ ಠಾಣೆಯ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಆದರೆ, ಪುಟ್ಟೇನಹಳ್ಳಿ ಪೊಲೀಸರ ತನಿಖೆಯಿಂದ ಇದು ಉದ್ದೇಶಪೂರ್ವಕ ಕೊಲೆ ಎಂಬ ಸತ್ಯ ಬಯಲಾಯಿತು. ತನಿಖೆಯ ವೇಳೆ ಆರೋಪಿಗಳಾದ ಮನೋಜ್ ಮತ್ತು ಆರತಿ, ದರ್ಶನ್ ಮತ್ತು ವರೂಣ್ ಕಾರಿನ ಮಿರರ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದೇ ಕಾರಣಕ್ಕೆ ದಂಪತಿಗಳು ಯುವಕರನ್ನು ಚೇಸ್ ಮಾಡಿ, ಒಮ್ಮೆ ತಪ್ಪಿಸಿಕೊಂಡ ಬಳಿಕ ಯೂ-ಟರ್ನ್ ಮಾಡಿ ಮತ್ತೆ ಬಂದು ಕಾರಿನಿಂದ ಡಿಕ್ಕಿ ಹೊಡೆದಿದ್ದಾರೆ. ಈ ಡಿಕ್ಕಿಯಿಂದ ದರ್ಶನ್‌ಗೆ ಗಂಭೀರ ಗಾಯಗಳಾಗಿ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.


