ಬೆಂಗಳೂರು : ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಜನಪ್ರತಿನಿಧಿಗಳ ವಿಷೇಶ ನ್ಯಾಯಾಲಯ ತೀರ್ಪು ಪ್ರಕಟಿಸಿದೆ..
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ನಟಿ ರಮ್ಯಾ ಸಹ ಪ್ರಜ್ವಲ್ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಎಲ್ಲಾ ಮಹಿಳೆಯರಿಗೆ ನ್ಯಾಯ ಸಿಗಲಿ. ಸೆಕ್ಸ್ ಸ್ಕ್ಯಾಂಡಲ್ ಮಹಿಳೆಯರ ಮೇಲಿನ ಅತೀ ದೊಡ್ಡ ದೌರ್ಜನ್ಯ. ಕಾನೂನು ತಕ್ಕ ಕ್ರಮ ತೆಗೆದುಕೊಂಡಿದೆ. ತೀರ್ಪು ನೋಡಿ ಸಂತೋಷವಾಗುತ್ತಿದೆ. ಕೋರ್ಟ್ ಒಳ್ಳೆಯ ಕೆಲಸ ಮಾಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೋರ್ಟ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ..
ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣಿರಿಟ್ಟಿದ್ದಾರೆ.