ರಾಜಕೀಯ

ಕೋವಿಡ್​ ಹಗರಣ; ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಮಧ್ಯಂತರ ವರದಿಯನ್ನು ಜಸ್ಟೀಸ್ ಮೈಕಲ್ ಡಿ ಕುನ್ಹಾ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.

ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಬಿಜೆಪಿ ಸರ್ಕಾರದ ಅವಧಿಯಲ್ಲಿ 2,000 ಕೋಟಿಗೂ ಅಧಿಕ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು. ಹಗರಣದ ಬಗ್ಗೆ ವರದಿ ಸಲ್ಲಿಸಲು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ ಕುನ್ನಾ ನೇತೃತ್ವದ ಆಯೋಗ ರಚಿಸಿತ್ತು. ಇಂದು ಸಂಜೆ ಸಿಎಂ ಸಿದ್ದರಾಮಯ್ಯಗೆ ಆಯೋಗ ವರದಿ ಸಲ್ಲಿಸಲಿದೆ.

ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿ ಹಲವು ಪ್ರಕರಣಗಳ ತನಿಖೆಗೆ ಶಿಫಾರಸು ಮಾಡಿತ್ತು. ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿತ್ತು.

Comments (0)

Your email address will not be published. Required fields are marked *

Back to top button