Top Newsಜಿಲ್ಲೆ

ಪಾಪಿಗಳು ಹಸುವಿನ ಕೆಚ್ಚಲು ಕತ್ತರಿಸಿದ್ರು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ.

ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ 20 ಹಸುಗಳನ್ನು ಕದ್ದೊಯ್ಯಲು ಪ್ರಯತ್ನಿಸಿದ್ದಾರೆ.

ಆದರೆ, ಈ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ದುಷ್ಕರ್ಮಿಗಳು ಹಸುವಿನ ಕೆಚ್ಚಲನ್ನು ಕತ್ತರಿಸಿ ಎಸ್ಕೇಪ್ ಆಗಿದ್ದಾರೆ.

ಕೆಚ್ಚಲು ಕತ್ತರಿಸಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಹಸು ಮೃತಪಟ್ಟಿದೆ.

ದುಷ್ಕರ್ಮಿಗಳ ಕೃತ್ಯದ ಬಗ್ಗೆ ಯಗಟಿ ಠಾಣೆ ಪೊಲೀಸರಿಗೆ ರೈತ ಶೇಖರಪ್ಪ ದೂರು ನೀಡಿದ್ದಾರೆ.

Comments (0)

Your email address will not be published. Required fields are marked *

Back to top button