ಬೆಂಗಳೂರು: ಕನ್ನಡದ ಕಾಂತಾರ ಚಾಪ್ಟರ್ 1 ಸಿನಿಮಾ ಇತ್ತೀಚಿಗೆ ಬಿಡುಗಡೆ ಯಾಗಿದ್ದು, ವಿಶ್ವದೆಲ್ಲೆಡೆ ಪ್ರದರ್ಶನ ಕಾಣುತ್ತಿದೆ.. ಆದರೆ ಕೆಲ ಅಭಿಮಾನಿಗಳು ಚಿತ್ರ ವೀಕ್ಷಿಸುವಾಗ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿದೆ.. ಈ ಹಿನ್ನಲೆ ಬೆಂಗಳೂರು ತುಳುಕೂಟ ನಟ ರಿಷಬ್ ಶೆಟ್ಟಿಗೆ ಪತ್ರ ಕಳುಹಿಸಿದೆ..
ಕಾಂತಾರ ಚಾಪ್ಟರ್ 1 ಸಿನಿಮಾ ಇಡೀ ಭಾರತೀಯ ಚಿತ್ರರಂಗ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದ ಕರಾವಳಿಯ ದೈವರಾಧನೆಯ ಚಿತ್ರ. ಮೊದಲ ಭಾಗದ ಯಶಸ್ಸಿನ ಬಳಿಕ ಬಿಡುಗಡೆಯಾಗಿರುವ ಈ ಸಿನಿಮಾ ಕೂಡ ಭಾರಿ ಸದ್ದು ಮಾಡುತ್ತಿದ್ದು, ಮತ್ತದೇ ರೀತಿಯ ಯಶಸ್ಸಿನ ಕಡೆ ಮುನ್ನುಗ್ಗುತ್ತಿದೆ. ಆದರೆ ಚಿತ್ರ ವೀಕ್ಷಣೆ ವೇಳೆ ಕೆಲವರ ಅತಿರೇಕದ ವರ್ತನೆ, ದೈವದ ಮೇಲೆ ನಂಬಿಕೆ ಇಟ್ಟವರ ಭಾವನೆಗೆ ಧಕ್ಕೆಯಾಗುತ್ತಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಂಗಳೂರು ತುಳುಕೂಟ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಪತ್ರದ ಮೂಲಕ ಮನವಿ ಮಾಡಿ, ಹುಚ್ಚಾಟ ಮಾಡುವವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ.


