ಕ್ರೈಂ ಸ್ಟೋರಿ

ಜೈಲಿನಿಂದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ

ಬೆಂಗಳೂರು: ಕಾಸು ಇದ್ದರೆ ಜೈಲಲ್ಲೂ ರಾಜರಂತೆ ಇರಬಹುದು ಎಂಬ ಮಾತು ಪದೆ ಪದೇ ಸತ್ಯವಾಗುತ್ತಿದೆ. ರಾಜ್ಯ ಕೇಂದ್ರ ಕಾರಾಗೃಹಗಳಲ್ಲಿನ ಕೈದಿಗಳು ಮೊಬೈಲ್ ಫೋನ್ ಉಪಯೋಗಿಸುತ್ತಿದ್ದು, ದುಷ್ಕೃತ್ಯ ಎಸಗುತ್ತಿದ್ದಾರೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸ್ ಇಲಾಖೆ ಎಷ್ಟೇ ಕ್ರಮ ಕೈಗೊಂಡರು ಉಪಯೋಗವಾಗುತ್ತಿಲ್ಲ ಎಂಬ ಮಾತು ಈ ಪ್ರಕರಣದ ಮೂಲಕ ಸತ್ಯವಾಗಿದೆ.

ಜೈಲಿನಲ್ಲಿ ಇದ್ದುಕೊಂಡು ಯುವತಿಯ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಬ್ಯ್ಲಾಕ್ಮೇಲ್ ಮಾಡಿದ ಆರೋಪಿ. ರೌಡಿಶೀಟರ್ ಮನೋಜ್ ಕಳೆದ ವರ್ಷ ಅಗಸ್ಟ್ನಲ್ಲಿ ಯುವತಿಯ ತಾಯಿಗೆ ಕರೆ ಮಾಡಿ, ನಿನ್ನ ಮಗಳ ಬೆತ್ತಲೆ ಫೋಟೋವನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಅಂತ ಬೆದರಿಕೆ ಹಾಕಿದ್ದನು. ಇದರಿಂದ ಬೆದರಿದ ಯುವತಿಯ ತಾಯಿ, ರೌಡಿಶೀಟರ್ ಮನೋಜ್ಗೆ 40 ಸಾವಿರ ಹಣ ನೀಡಿದ್ದರು.

ಇನ್ನು ಫೆಬ್ರವರಿ 9 ರಂದು ಮನೋಜ್ ಸಹಚರ ಕಾರ್ತಿಕ್ ಯುವತಿಯ ತಾಯಿಗೆ ವಾಟ್ಸಪ್ ಮೂಲಕ ಕರೆ ಮಾಡಿ, ನಾನು ಮನೋಜ್ ಕಡೆಯ ಹುಡುಗ. ನೀವು 5 ಲಕ್ಷ ರೂ. ಕೊಡದಿದ್ದರೆ ನಿಮ್ಮಗಳ ಮಗಳ ನಗ್ನ ಫೋಟೋವನ್ನು ನಿನ್ನ ಅಳಿಯನಿಗೆ ಕಳಸುತ್ತೇನೆ ಅಂತ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಾದ ಬಳಿಕ ಫೆಬ್ರವರಿ 12 ರಂದು ಮನೋಜ್ ಜೈಲಿನಿಂದಲೇ ಯುವತಿಯ ತಾಯಿಗೆ ವಾಟ್ಸಾಪ್ ಹಾಗೂ ಮೆಸೆಂಜರ್ ಮೂಲಕ ಕರೆ ಮಾಡಿ, ಹಣ ನೀಡದಿದ್ದರೆ ನಿನ್ನ ಮಗಳ ನಗ್ನ ಫೋಟೋ ರಿವೀಲ್ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ.

Comments (0)

Your email address will not be published. Required fields are marked *

Back to top button