Wednesday, April 30, 2025
24 C
Bengaluru
LIVE
ಮನೆಜಿಲ್ಲೆಚಾಮರಾಜನಗರ ಜಿಲ್ಲೆ ಬಿಜೆಪಿ ಅಧ್ಯಕ್ಷರಾಗಿ ಸಿಎಸ್ ನಿರಂಜನ್ ಪದಗ್ರಹಣ

ಚಾಮರಾಜನಗರ ಜಿಲ್ಲೆ ಬಿಜೆಪಿ ಅಧ್ಯಕ್ಷರಾಗಿ ಸಿಎಸ್ ನಿರಂಜನ್ ಪದಗ್ರಹಣ

ಚಾಮರಾಜನಗರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿಯ ಸಾರಥ್ಯ ವಹಿಸಿದ ಬಳಿಕ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತನ್ನ ಚಾಪು ಮೂಡಿಸಲು ಮುಂದಾಗಿರುವ ಬಿವೈ ವಿಜಯೇಂದ್ರ ಗಡಿ ಜಿಲ್ಲೆ ಚಾಮರಾಜನಗರ ಬಿಜೆಪಿಗೆ ತಮ್ಮ ಅಪ್ತರಿಗೆ ಮಣೆ ಹಾಕಿದ್ದಾರೆ.

ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ನಾರಾಯಣ್ ಪ್ರಸಾದ್ ನೂತನ ಅಧ್ಯಕ್ಷ ಸಿಎಸ್ ನಿರಂಜನ್ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದ್ದಾರೆ.

ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರುಗಳಾದ ಪ್ರೊ: ಕೆ.ಆರ್. ಮಲ್ಲಿಕಾರ್ಜುನಪ್ಪ, ಬಾಲರಾಜ್, ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ನೂರೊಂದುಶೆಟ್ಟಿ, ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಜಿ.ಪಂ.ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ, ನಾಗಶ್ರೀ ಪ್ರತಾಪ್, ಕೊಡಸೋಗೆ ಶಿವಬಸಪ್ಪ, ಮಂಗಲ ಶಿವಕುಮಾರ್ ಅರಕಲವಾಡಿ ನಾಗೇಂದ್ರ, ನಗರಸಭಾ ಮಾಜಿ ಅಧ್ಯಕ್ಷೆ ಆಶಾ ನಟರಾಜ್ ನಗರಸಭಾ ಸದಸ್ಯ ಮಮತ ಕುಮುದಾ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments