ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್‌ಗೆ ಹಾಜರುಪಡಿಸಿದರು.
5ನೇ ಸಿವಿಲ್ ಅಂಡ್ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ರು, ಕಲಂ 481 ಅಡಿ ವಕೀಲರು ಬೇಲ್‌ಗೆ ಅರ್ಜಿ ಸಲ್ಲಿಸಿದರು. ಈ ವೇಳೆ ಕೋರ್ಟ್‌ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು ಹಾಕಿದ್ರು, ಬಳಿಕ ಅವರಿಗೆ ಆರ್. ಅಶೋಕ್, ಅಭಯ್ ಪಾಟೀಲ್ ಸಾಂತ್ವನ ಹೇಳಿದ ಪ್ರಸಂಗ ನಡೆಯಿತು. ನಂತರ ನ್ಯಾಯಾಧೀಶರಾದ ಸ್ಪರ್ಶಾ ಎಂ ಡಿಸೋಜಾ ಎದುರು ವಾದ ಮಂಡಿಸಿದ ಸಿ.ಟಿ ರವಿ ಪರ ವಕೀಲರಾದ ಎಮ್.ಬಿ. ಜಿರಲಿ ಮತ್ತು ರವಿರಾಜ್ ಪಾಟೀಲ್ ತಮ್ಮ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ರು.