Wednesday, April 30, 2025
29.2 C
Bengaluru
LIVE
ಮನೆಜಿಲ್ಲೆಪಿಎಚ್​ಡಿಯ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸಿಟಿ ರವಿ

ಪಿಎಚ್​ಡಿಯ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸಿಟಿ ರವಿ

ಮೈಸೂರು : ಮಾಜಿ ಸಚಿವ ಸಿಟಿ ರವಿ ಅವರು ತಮ್ಮ ಪಿಎಚ್​ಡಿ ಮಹಾ ಪ್ರಬಂಧ ಸಲ್ಲಿಸಿದ್ದು, ಇದೀಗ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಇದರ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮೌಖಿಕ ಪರೀಕ್ಷೆಯನ್ನು ಯಶಸ್ವಿಗೊಳಸಿರುವ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ ಜೆ ಸುರೇಶ್ ಅವರ ಮಾರ್ಗದರ್ಶನದಲ್ಲಿ ಸಿಟಿ ರವಿ ಅವರು “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ” ವಿಷಯದ ಮೇಲೆ ಸಂಶೋಧನೆ ನಡೆಸಿದ್ದಾರೆ. ಅಲ್ಲದೇ ಈಗಾಗಲೇ ಪಿಎಚ್.ಡಿ ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗಕ್ಕೆ ಮಹಾ ಪ್ರಬಂಧ ಸಲ್ಲಿಸಿದ್ದು, ಇದೀಗ ಇದರ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಸಿಟಿ ರವಿ ಅವರ ಪಿಎಚ್​ಡಿ ಅಂತಿಮ ಹಂತಕ್ಕೆ ಬಂದಿದೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ ಅವರು ಇದೀಗ ಅದೇ ವಿವಿಯಲ್ಲಿ ಪಿಎಚ್​ಡಿ ಪದವಿ ಪಡೆದುಕೊಳ್ಳಲಿದ್ದಾರೆ. ಸಿಟಿ ರವಿ ಅವರು ಪಿಎಚ್​ಡಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾಹಿತಿ ಕಲೆಹಾಕಿದ್ದರು. ವಿಧೇಯ ವಿದ್ಯಾರ್ಥಿಯಂತೆ ದೇವೇಗೌಡ ಬಳಿ ಸಂಶೋಧನಾ ಮಾಹಿತಿ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments