ರಾಜ್ಯ
ಕರ್ನಾಟಕಕ್ಕೆ ಮತ್ತೆ ಶಾಕ್ – ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA!
Another shock for Karnataka – CWMA upholds CWRC order to release water to Tamil Nadu!

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಸೂಚನೆಯಂತೆ, ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ಆದೇಶ ನೀಡಲಾಗಿದೆ.
ನವದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಈ ಹಿಂದೆ ನೀಡಿದ್ದ ಶಿಫಾರಸಿನಂತೆ, ಕರ್ನಾಟಕವು ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ರಾಜ್ಯದ ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಮಳೆಯ ಕೊರತೆಯ ಬಗ್ಗೆ ಕರ್ನಾಟಕದ ಅಧಿಕಾರಿಗಳು ಸಭೆಯಲ್ಲಿ ವಿವರಣೆ ನೀಡಿದರೂ, ಪ್ರಾಧಿಕಾರವು ತಮಿಳುನಾಡಿನ ಬೇಡಿಕೆಯಂತೆ ನೀರು ಹರಿಸಲು ಸೂಚಿಸಿದೆ.




