ಕರ್ನಾಟಕಕ್ಕೆ ಮತ್ತೆ ಶಾಕ್ – ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ!
Another shock for Karnataka – CWRC orders release of 12,000 cusecs of water daily to Tamil Nadu!

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿಯ ಈ ಆದೇಶದಿಂದ ರಾಜ್ಯದ ಕನ್ನಡಿಗರು, ರೈತಪರ ಸಂಘಟನೆಗಳು ಮತ್ತೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಇದೀಗ CWRC ಆದೇಶವನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಕೆಲವೇ ಕ್ಷಣಗಳಲ್ಲಿ CWMA ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯದ ಪರವಾಗಿ ಪ್ರಬಲವಾದ ವಾದ ಮಂಡಿಸಲು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಸಭೆಯಲ್ಲಿ ತಮಿಳುನಾಡಿನ ಬೇಡಿಕೆಯನ್ನು ವಿರೋಧಿಸಲು ರಾಜ್ಯ ಸರ್ಕಾರ ಪ್ರಮುಖ ಕಾರಣವೊಂದನ್ನು ಮುಂದಿಡಲು ಸಜ್ಜಾಗಿದೆ. ಕೃಷಿಗಿಂತ ಹೆಚ್ಚಾಗಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೀಸಲಿಡಬೇಕಾದ ಅನಿವಾರ್ಯತೆಯನ್ನು ಪ್ರಾಧಿಕಾರದ ಮುಂದೆ ಬಲವಾಗಿ ಮಂಡಿಸಲು ನಿರ್ಧರಿಸಲಾಗಿದೆ.




