Wednesday, June 25, 2025
26.3 C
Bengaluru
Google search engine
LIVE
ಮನೆ#Exclusive NewsTop Newsಒಡಿಶಾ ತೀರಕ್ಕೆ ಅಪ್ಪಳಿಸಿದ 'ಡಾನಾ' ಚಂಡಮಾರುತ : ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ಒಡಿಶಾ ತೀರಕ್ಕೆ ಅಪ್ಪಳಿಸಿದ ‘ಡಾನಾ’ ಚಂಡಮಾರುತ : ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ಭುವನೇಶ್ವರ: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.

ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.

ನೆರೆಯ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಮತ್ತು ಕೋಲ್ಕತ್ತಾದಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ.

ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದೆ. ವಿಮಾನ ನಿಲ್ದಾಣವನ್ನು ಬಂದ್‌ ಮಾಡಿದ ಪರಿಣಾಮ ಸುಮಾರು 40 ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 400ಕ್ಕೂ ಹೆಚ್ಚು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಒಡಿಶಾದಲ್ಲಿ ಸುಮಾರು 6 ಲಕ್ಷ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments