ಕೊಪ್ಪಳ: ಅಡುಗೆ ಮನೆಯ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಇದ್ದ 8 ಮಂದಿ ಗಮಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ..
ಅದೃಷ್ಟವಶಾತ್ ಸಾವು ಸಂಭವಿಸದಿದ್ದರೂ, ಗಾಯಾಳುಗಳು ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40), ನಾಗರಾಜ (18), ದುರುಗಮ್ಮ (17), ವಿಷ್ಣು (16), ಶ್ರೀಕಾಂತ್ (22) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಹಳೆ ಸಿಲಿಂಡರ್ ಖಾಲಿಯಾಗಿ ಹೊಸ ಸಿಲಿಂಡರ್ ನ್ನು ಫಿಕ್ಸ್ ಮಾಡುತ್ತಿದ್ದರು. ಹೊಸ ಸಿಲಿಂಡರ್ ಅಳವಡಿಸುತ್ತಿದ್ದಾಗ ಅಚಾನಕಾಗಿ ಸ್ಫೋಟ ಸಂಭವಿಸಿ, ಮನೆಯ ಗೋಡೆಗಳು ಕುಸಿದುಬಿದ್ದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ತಂಡವು ನೆಲಸಮವಾದ ಮನೆಯ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆಸಿದ್ದಾರೆ.


