ಹುಬ್ಬಳ್ಳಿ: ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಐವರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮೃತ ದುರ್ದೈವಿಗಳು. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಕಿಮ್ಸ್ಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಶಂಕರ್ ಚವ್ಹಾಣ್ (29) ಮೃತ ಅಯ್ಯಪ್ಪ ಮಾಲಾಧಾರಿ. ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.