ಹುಬ್ಬಳ್ಳಿ : ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಬಿಟ್ಟಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.