ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು.ಇದೀಗ ಇಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ.ಬೆಂಗಳೂರು ನಗರದ ಟಿ ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. 1 ಮಗು ಹಾಗೂ ಇಬ್ಬರು ಪುರುಷರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನೇಕಲ್ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಇದೀಗ ಟಿ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ ಹಲವರು ಗಾಯಗೊಂಡಿದ್ದಾರೆ. ಇದರಿಂದಾಗಿ ಅಡುಗೆ ಮನೆಯಲ್ಲಿ ಸಿಲಿಂಡರ್ ಬಳಸಲು ಹೆದರುವಂತಾಗಿದೆ.