ಬೆಂಗಳೂರು: ಬೇಗೂರಿನ ಅಕ್ಷಯನಗರದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಸ್ಕ್ರಾಪ್ ಗೋಡೌನ್ ಹೊತ್ತಿ ಉರಿದಿದೆ..
ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯಿಂದ ಬಂದ ಹೊಗೆ ಇಡೀ ಏರಿಯಾವನ್ನೇ ಸುತ್ತುವರೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಮೂರು ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ.
ಅಕ್ಷಯನಗರದ ಸ್ಕ್ರಾಪ್ ಗೋಡೌನ್‌ನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಗೋಡೌನ್‌ನಲ್ಲಿದ್ದ ಸಿಲಿಂಡರ್‌ನಿಂದ ಸೋರಿಕೆಯಾದ ಗ್ಯಾಸ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯಿದೆ.
ಹಳೆಯ ಪ್ಲಾಸ್ಟಿಕ್ ವಸ್ತುಗಳು ಮತ್ತು ಸ್ಕ್ರಾಪ್ ವಸ್ತುಗಳಿಗೆ ಬೆಂಕಿ ತಗುಲಿದ್ದು, ದಟ್ಟ ಹೊಗೆಯಿಂದ ಸುತ್ತಮುತ್ತಲಿನ ಪ್ರದೇಶ ಕತ್ತಲಿನಲ್ಲಿ ಮುಳುಗಿತ್ತು. ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿಯೂ ಘಟನಾ ಸ್ಥಳದಲ್ಲಿ ಭದ್ರತೆಯನ್ನು ಒದಗಿಸುತ್ತಿದ್ದಾರೆ.


