Top Newsರಾಜಕೀಯರಾಜ್ಯಸುದ್ದಿ

ಫೋನ್ ಟ್ಯಾಪಿಂಗ್ ಆರೋಪಕ್ಕೆ ಡಿ.ಕೆ. ಸುರೇಶ್ ತಿರುಗೇಟು..!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ. “ಫೋನ್ ಟ್ಯಾಪಿಂಗ್ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಈ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ” ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಹೆಚ್‌ಡಿಕೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾರೆ, ಇವರು ರಾಜ್ಯದಲ್ಲಿದ್ದಾರೆ. ಫೋನ್ ಟ್ಯಾಪಿಂಗ್ ಬಗ್ಗೆ ಅವರಿಬ್ಬರಿಗೂ ಚೆನ್ನಾಗಿ ಗೊತ್ತಿರುತ್ತದೆ, ಅವರೇ ಉತ್ತರ ನೀಡುತ್ತಾರೆ. ನಾವು ಸಾಮಾನ್ಯ ಕಾರ್ಯಕರ್ತರು, ನಮಗೇನು ಗೊತ್ತು? ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಎಲ್ಲ ವಿಷಯಗಳ ಬಗ್ಗೆಯೂ ಹೆಚ್ಚಿನ ಮಾಹಿತಿ ಇರುತ್ತದೆ, ಹಾಗಾಗಿ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಸುರೇಶ್ ತಿಳಿಸಿದರು.

ರಾಜ್ಯ ರಾಜಕಾರಣದಲ್ಲಿ ಫೋನ್ ಟ್ಯಾಪಿಂಗ್ ಆರೋಪ ಈಗ ಹೊಸ ಸಂಚಲನ ಮೂಡಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿವೆ. ಇದರ ನಡುವೆ ಡಿ.ಕೆ. ಸುರೇಶ್ ಅವರ ಈ ‘ಸಾಮಾನ್ಯ ಕಾರ್ಯಕರ್ತ’ ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Comments (0)

Your email address will not be published. Required fields are marked *

Back to top button