Top Newsರಾಜ್ಯಸಿನಿಮಾಸುದ್ದಿ

ನಟ ಶಿವಣ್ಣ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ

ಸ್ಯಾಂಡಲ್‌ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ.

ನಗರದ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಡಾಲಿ ಧನಂಜಯ್ ಶಿವಣ್ಣ ಅವರ ಆರೋಗ್ಯವನ್ನು ವಿಚಾರಿಸಿ, ಸ್ವಲ್ಪ ಕಾಲ ಅವರೊಂದಿಗೆ ಸಮಯ ಕಳೆದಿದ್ದಾರೆ.

ಇನ್ನೂ ನಟ ಶಿವರಾಜ್ ಕುಮಾರ್ ಅವರು ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಸಂಪೂರ್ಣ ಚೇತರಿಸಿಕೊಳ್ಳುವವರೆಗೂ ಅಲ್ಲೆಯೇ ನೆಲೆಸಿದ್ದರು. ಪೂರ್ಣವಾಗಿ ಗುಣಮುಖರಾದ ನಂತರ ನಿನ್ನೆ ತಮ್ಮ ನಿವಾಸಕ್ಕೆ ತೆರಳಿದ್ದು. ಈ ಹಿನ್ನೆಲೆಯಲ್ಲಿ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಧನಂಜಯ್ ಆರೋಗ್ಯವನ್ನು ವಿಚಾರಿಸಿದ್ದಾರೆ.

ಇನ್ನೂ ಡಾಲಿ ಅವರು ಇದೇ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಮೈಸೂರಿನಲ್ಲಿ ನಡೆಯಲಿರುವ ಮದುವೆಗೆ ಚಿತ್ರರಂಗದ ಕಲಾವಿದರಿಗೆ ಮತ್ತು ರಾಜಕೀಯ ರಂಗದ ಗಣ್ಯರಿಗೆ ಮದುವೆಗೆ ಆಹ್ವಾನ ನೀಡಲಾಗಿದೆ.

 

Comments (0)

Your email address will not be published. Required fields are marked *

Back to top button