#Exclusive NewsTop Newsಮನರಂಜನೆರಾಜ್ಯಸಿನಿಮಾಸುದ್ದಿ

ಮದುವೆಗೆ ಮಾಜಿ ಪ್ರಧಾನಿ ದೇವೇಗೌಡರನ್ನ ಆಹ್ವಾನಿಸಿದ ಡಾಲಿ….

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಅವರು ಫೆ.16 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ  ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.

ಭಾವಿ ಪತ್ನಿ ಧನ್ಯತಾ ಜೊತೆ ಮಾಜಿ ಪ್ರಧಾನಿ ಹೆ.ಚ್.ಡಿ. ದೇವೇಗೌಡ  ನಿವಾಸಕ್ಕೆ ಭೇಟಿ ನೀಡಿ, ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಅಂದಹಾಗೆ, ಇತ್ತೀಚೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಕೂಡ ಭಾವಿ ಪತ್ನಿಯ ಜೊತೆ ಭೇಟಿಯಾಗಿ ಮದುವೆಗೆ ಆಹ್ವಾನ ನೀಡಿದ್ದರು.ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

Comments (0)

Your email address will not be published. Required fields are marked *

Back to top button