ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ಜಾಮೀನಿನ ಮೇಲಿರುವ ನಟ ದರ್ಶನ್ ಸದ್ಯ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಈ ಮದ್ಯೆ ನಟ ದರ್ಶನ್ ತಮ್ಮ ಪತ್ನಿ, ಮಗ, ಹಾಗೂ ನಟ ಧನ್ವಿರ್ ಜೊತೆ ದೇವಾಲಯದಲ್ಲಿ ಕಾಣಿಸಿಕೊಂಡಿದ್ದು ಕುತೂಹಲ ಮೂಡಿದೆ.
ಕೇರಳದ ಕಣ್ಣೂರಿನಲ್ಲಿ ಪುರಾಣ ಪ್ರಸಿದ್ಧ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನ ಇದೆ. ಇಲ್ಲಿಗೆ ಹಲವು ರಾಜಕಾರಣಿಗಳು ಶತ್ರು ಸಂಹಾರ ಪೂಜೆ ಮಾಡಿಸಲು ತೆರಳುತ್ತಾರೆ. ಈ ದೇವಾಲಯಕ್ಕೆ ನಟ ದರ್ಶನ್ ಕುಟುಂಬ ಸಮೇತ ತೆರಳಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿ ದೇವರ ದರ್ಶನ ಪಡೆದಿದ್ದಾರೆ.
ಇನ್ನು ದರ್ಶನ್ ಜೈಲಿನಲ್ಲಿದ್ದಾಗ ಅವರ ಪತ್ಮಿ ವಿಜಯಲಕ್ಷ್ಮಿ ಹಲವು ದೇವಾಲಯಗಳಿಗೆ ಭೇಟಿ ನೀಡಿ ಹರಕೆ ಹೊತ್ತಿದ್ದರು. ಇದೀಗ ಇದೀಗ ಕೇರಳದ ಕಣ್ಣೂರಿನ ಮಾಡಾಯಿಕಾವು ದೇವಸ್ಥಾನದಲ್ಲಿ ಪತ್ನಿ ವಿಜಯಲಕ್ಷ್ಮಿ, ಮಗ ಹಾಗೂ ನಟ ಧನ್ವೀರ್ ಜೊತೆ ವಿಜಯಲಕ್ಷ್ಮಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.