ದರ್ಶನ್ ದಂಪತಿಗೆ ಬಿಗ್ ಶಾಕ್ – ‘ಬಾಸ್’ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಅಸ್ತು!
Big shock for Darshan couple - High Court stays release of 'Boss' movie!

ಬೆಂಗಳೂರು : ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದ್ದು, ಸಿನಿಮಾ ರಿಲೀಸ್‌ಗೆ ಅನುಮತಿ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಭರ್ಜರಿ ಜಯ ಸಿಕ್ಕಿದೆ.
‘ಬಾಸ್’ ಚಿತ್ರದ ಬಿಡುಗಡೆ ವಿಚಾರವಾಗಿ ಕಳೆದ ಒಂದೂವರೆ ತಿಂಗಳಿನಿಂದ ಕಾನೂನು ಹೋರಾಟ ನಡೆಯುತ್ತಿತ್ತು. ಚಿತ್ರದ ಬಿಡುಗಡೆಯನ್ನು ತಡೆಯಬೇಕೆಂದು ದರ್ಶನ್ ದಂಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರವಾಗಿ ನ್ಯಾಯಾಲಯದಲ್ಲಿ ಸುದೀರ್ಘ ವಾದ-ವಿವಾದಗಳು ನಡೆದಿದ್ದವು. ಇದೀಗ ಎಲ್ಲ ಅಡೆತಡೆಗಳನ್ನು ನಿವಾರಿಸಿರುವ ಹೈಕೋರ್ಟ್, ಚಿತ್ರ ಬಿಡುಗಡೆಗೆ ಅವಕಾಶ ನೀಡಿದೆ.
‘ಬಾಸ್’ ಸಿನಿಮಾ ತೆರೆಗೆ ಬರಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚಿತ್ರಕ್ಕೆ ಬಿಡುಗಡೆಯ ಹಂತದಲ್ಲಿ ಎದುರಾಗಿದ್ದ ದೊಡ್ಡ ಅಡ್ಡಿ ಇದೀಗ ಸಂಪೂರ್ಣವಾಗಿ ನಿವಾರಣೆಯಾಗಿದೆ. ನ್ಯಾಯಾಲಯದ ತೀರ್ಪಿನ ನಂತರ ಚಿತ್ರತಂಡದಲ್ಲಿ ಸಂತಸ ಮನೆಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಚಿತ್ರದ ನಾಯಕ ನಟ, ನಿರ್ಮಾಪಕರಾದ ತನುಷ್ ಶಿವಣ್ಣ ಮತ್ತು ನಿರ್ದೇಶಕರಾದ ಲವಾ ವಿ ಸಂತೋಷ ವ್ಯಕ್ತಪಡಿಸಿದ್ದಾರೆ.
‘ಬಾಸ್’ ಸಿನಿಮಾ ಇಂದು ಸಂಜೆಯಿಂದ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದ್ದು, ಜೊತೆಗೆ ಮುಂಬೈ ಹಾಗೂ ಚೆನ್ನೈ ಸೇರಿದಂತೆ ವಿವಿಧ ನಗರಗಳಲ್ಲಿಯೂ ಪ್ರದರ್ಶನ ಆರಂಭವಾಗಲಿದೆ.




