ಕ್ರೈಂ ಸ್ಟೋರಿ

ದರ್ಶನ್​ಗೆ ಸದ್ಯಕ್ಕಿಲ್ಲ ಟೆನ್ಷನ್​.. ಏ.22ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ: ರೇಣುಕಾ ಸ್ವಾಮಿ ಕೊಲೆ ಕೇಸ್​​​ನಲ್ಲಿ ಆರೋಪಿ ದರ್ಶನ್​ಗೆ ಹೈಕೋರ್ಟ್​ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೋಲಿಸರು ಮೇಲ್ಮನವಿ ಸಲ್ಲಿಸಿದ್ರು. ಇಂದು ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​, ದರ್ಶನ್​ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ಏ.22ಕ್ಕೆ ವಿಚಾರಣೆ ಮುಂದೂಡಿದೆ.

ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ 13 ರಂದು ಜಾಮೀನು ನೀಡಿತ್ತು. ಆ ಬಳಿಕ ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಕರ್ನಾಟಕ ಸರ್ಕಾರದ ಪರವಾಗಿ ವಕೀಲ ಅನಿಲ್ ನಿಶಾನಿ ಅರ್ಜಿ ಸಲ್ಲಿಸಿದ್ದರು.

Comments (0)

Your email address will not be published. Required fields are marked *

Back to top button