ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಕೋರ್ಟ್ ಸೂಚನೆ ಕೊಟ್ರು ನನಗೆ ಸೌಲಭ್ಯ ನೀಡ್ತಿಲ್ಲ ಎಂದು ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ.. ಈ ಸಂಬಂಧ ಇಂದು ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ.
ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು.
ವಿಚಾರಣೆ ಸಂದರ್ಭದಲ್ಲಿ ಜೈಲ್ ಸೂಪರಿಂಟೆಂಡೆಂಟ್ ಸುರೇಶ್ ಕೂಡ ಹಾಜರಾರಿದ್ದು, ಈ ವೇಳೆ ಎಸ್ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸುನೀಲ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅ.9ಕ್ಕೆಆದೇಶವನ್ನು ಕಾಯ್ದಿರಿಸಿದೆ.


