Top Newsಕ್ರೈಂ ಸ್ಟೋರಿಸಿನಿಮಾಸುದ್ದಿ

ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.

ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್‌ ಅವರನ್ನು ಇಂದೇ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ. ಶಿರಾ ತುಮಕೂರು ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್‌ ಅವರನ್ನು ಕರತರಲಾಗುತ್ತದೆ.

ಹೀಗಾಗಿ ಬಳ್ಳಾರಿ ಜೈಲ್ ಅಧಿಕಾರಿಗಳು ಪುಲ್ ಅಲರ್ಟ್ ಆಗಿದ್ದು, ಜೈಲ್‌ನ ಎರಡು ಸಂಪರ್ಕ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಕೆ ಮಾಡಿಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಬಳ್ಳಾರಿ ಜೈಲು ಅಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಿಟಿಂಗ್ ಮಾಡಿದ್ದಾರೆ. ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಪ್ಲಾನ್ ಮಾಡಿದ್ದಾರೆ.

ಜೈಲ್ ಸುತ್ತ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿಗಳ ನಿಯೋಜನೆ ಮಾಡಲು ಪ್ಲಾನ್ ಆಗಿದೆ. ಮತ್ತೊಂದೆಡೆ ಅಂತಿಮ ಹಂತವಾಗಿ ವಿವಿಐಪಿ ಸೆಲ್ ಪರಿಶೀಲನೆ, ಜೈಲ್ ಸುತ್ತ ಇರುವ ಸಿಸಿ ಕ್ಯಾಮರಗಳ ವರ್ಕ್ ಕಂಡಿಷನ್​ನ್ನು  ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ.

Comments (0)

Your email address will not be published. Required fields are marked *

Back to top button