ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.

ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ. ಇದರಿಂದ ದರ್ಶನ್ ಮತ್ತಷ್ಟು ಸೊರಗಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

By admin

Leave a Reply

Your email address will not be published. Required fields are marked *

Verified by MonsterInsights