Wednesday, August 20, 2025
18.9 C
Bengaluru
Google search engine
LIVE
ಮನೆ#Exclusive NewsTop Newsಕೈದಿಯಾಗಿ ನಟಿಸಿದ್ದ ಜೈಲಿಗೆ ಕೈದಿಯಾಗಿ ದರ್ಶನ್​ ಶಿಫ್ಟ್

ಕೈದಿಯಾಗಿ ನಟಿಸಿದ್ದ ಜೈಲಿಗೆ ಕೈದಿಯಾಗಿ ದರ್ಶನ್​ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ರಾಜಾತಿಥ್ಯದ ನೀಡಿರುವ ಫೋಟೋ ವೈರಲ್ ಆಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನ್ಯಾಯಾಲಯದ ಅನುಮತಿ ಸಿಕ್ಕಿದೆ. ಈ ಬಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಇದರಿಂದ ದರ್ಶನ್ ಗೆ ಇನ್ನಷ್ಟು ಕಂಟಕವಾಗಿ ಪರಿಣಮಿಸಿದೆ.

ಯಾರ್ಯಾರು ಎಲ್ಲೆಲ್ಲಿಗೆ ಶಿಫ್ಟ್..

ದರ್ಶನ್​ ಮಾತ್ರವಲ್ಲದೇ, ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿನ ಎಲ್ಲ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ ಬಂದಿದೆ. ಆರೋಪಿಗಳ ಸ್ಥಳಾಂತರಕ್ಕೆ ಚೀಫ್ ಸೂರ್ಪಡೆಂಟ್ ಅವರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಆದೇಶ ಸಿಕ್ಕಿರುವುದರಿಂದ ಎಲ್ಲ ಆರೋಪಿಗಳ ಸ್ಥಳಾಂತರ ಪ್ರಕ್ರಿಯೆ ಆರಂಭಿಸಲಾಗಿದೆ. ದರ್ಶನ್​ ಶಿಫ್ಟ್​ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ವ್ಯವಸ್ಥೆ ಇದೆ.

ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದು, ಪವನ್ , ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಶಿಫ್ಟ್​ ಆಗಬೇಕಿದೆ. ಜಗದೀಶ್​ಗೆ ಶಿವಮೊಗ್ಗ ಜೈಲು, ಧನರಾಜ್​ಗೆ ಧಾರವಾಡ ಜೈಲು ಗತಿಯಾಗಿದೆ. ವಿಜಯಪುರ ಜೈಲಿಗೆ ವಿನಯ್​ ಸ್ಥಳಾಂತರ ಮಾಡಬೇಕಿದೆ. ನಾಗರಾಜ್​ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ.

ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ಎ7 ಆರೋಪಿ ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರದಲ್ಲೇ ಕೈಬಿಡಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments