ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಆರೋಪಿ ದರ್ಶನ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ.
ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಬೇರೆ ಜೈಲುಗಳಿಗೆ ಸ್ಥಳಾಂತರ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಸಿಸಿಎಚ್ 57ನೇ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರದೋಶ್ ಜೈಲು ಸ್ಥಳಾಂತರ ಕುರಿತು ಆದೇಶ ಹೊರ ಬಿಳಲಿದೆ. ಅಲ್ಲದೇ ಆರೋಪಿಗಳು ಕೂಡ ಕೋಟ್ರ್ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ಸಂಬಂಧ ವಿಚಾರಣೆ ನಡೆಸಿ ಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ, ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡುವಂತೆ ಹಾಗೂ ಪವಿತ್ರಾ ಗೌಡ ಮತ್ತು ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಪ್ರದೂಷ್ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯಾಗಿದ್ದು, ಉಳಿದ ನಾಲ್ವರು ಆರೋಪಿಗಳ ಪರ ಇಂದು ಆಕ್ಷೇಪಣೆ ಸಲ್ಲಿಕೆಯಾಗಲಿದೆ.